ಡಿಪ್ಲೊಮೋ ವಿದ್ಯಾರ್ಥಿಗಳಿಗೆ ಅನ್ಯಾಯ: ಸಮಗ್ರ ತನಿಖೆಗೆ ಆಗ್ರಹ – ವೆಂಕಟಾಚಲಪತಿ ಬೆಂಗಳೂರು. ನಾಡ್ಗರ್ ಸಂಜೆ ಕಾಲೇಜ್ ವಿರುದ್ಧ ದೂರು

ಡಿಪ್ಲೊಮೋ ವಿದ್ಯಾರ್ಥಿಗಳಿಗೆ ಅನ್ಯಾಯ: ಸಮಗ್ರ ತನಿಖೆಗೆ ಆಗ್ರಹ – ವೆಂಕಟಾಚಲಪತಿ
ಬೆಂಗಳೂರು ನಾಡ್ಗರ್ ಸಂಜೆ ಕಾಲೇಜ್ ಮೇಲೆ ದೂರು
ಬೆಂಗಳೂರು, ಜು. 29: ರಾಜ್ಯದ ಡಿಪ್ಲೊಮೋ ವಿದ್ಯಾರ್ಥಿಗಳಿಗೆ ನಡೆಯುತ್ತಿದೆ ಎನ್ನಲಾದ ಅನ್ಯಾಯದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋಲಾರ ಜಿಲ್ಲಾ ಜನಪರ ವೇದಿಕೆ ಆಗ್ರಹಿಸಿದೆ.
ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಬೆಂಗಳೂರುನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪದಾಧಿಕಾರಿಗಳು, ಡಿಪ್ಲೊಮೋ ಪರೀಕ್ಷೆಗಳ ಮೌಲ್ಯಮಾಪನ, ಉತ್ತರ ಪತ್ರಿಕೆಗಳ ನಿರ್ವಹಣೆ ಹಾಗೂ ಫಲಿತಾಂಶ ಪ್ರಕಟಣೆಯಲ್ಲಿ ಗಂಭೀರ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬರುತ್ತಿವೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಅಹವಾಲುಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಸಹಿ ಸಿಕೊಳ್ಳಲಾಗುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಡಿಪ್ಲೊಮೋ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಅತ್ಯಗತ್ಯವಾಗಿದ್ದು, ಉತ್ತರ ಪತ್ರಿಕೆಗಳ ಮರು ಪರಿಶೀಲನೆ, ಮೌಲ್ಯಮಾಪನ ಪ್ರಕ್ರಿಯೆಯ ಸಮಗ್ರ ತನಿಖೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಡಿಮಾಂಡ್ ಮಾಡಿದರು.
ಈ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ಒದಗಿಸಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೋಲಾರ ಜಿಲ್ಲಾ ಜನಪರ ವೇದಿಕೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳಾದ ರಮೇಶ್ ಬಾಬು .ವಿ, ವೆಂಕಟಾಚಲಪತಿ.ಕೆ.ಪಿ , ನಾಗರಾಜ್ .ಕೆ. ಉಪಸ್ಥಿತರಿದ್ದರು. ವರದಿ. ಮಂಜುಳಾ ರೆಡ್ಡಿ



