ಸಾಮಾಜಿಕ ಮೌಲ್ಯಗಳನ್ನು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು: ಡಾ. ನಂದು ಪೂಜಾರಿ.
ಸಾಮಾಜಿಕ ಮೌಲ್ಯಗಳನ್ನು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು: ಡಾ. ನಂದು ಪೂಜಾರಿ
ಸುರಪುರ: ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಹಾಗೂ ಸಾಮಾಜಿಕ ಮೌಲ್ಯಗಳನ್ನು ಕಾಪಾಡುವಲ್ಲಿ ವಿಶಿಷ್ಟ ಪಾತ್ರ ವಹಿಸುತ್ತಾರೆ ಎಂದು ಕರ್ನಾಟಕ ಪ್ರೆಸ್ ಕ್ಲಬ್‌ನ ಸಂಘಟನಾ ಕಾರ್ಯದರ್ಶಿ ಡಾ. ನಂದು ಪೂಜಾರಿ ಹೇಳಿದರು.
ಪಟ್ಟಣದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಮಾಧ್ಯಮವಲ್ಲ, ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ
ಪತ್ರಕರ್ತರು ನಿಷ್ಪಕ್ಷಪಾತತೆ, ಪ್ರಾಮಾಣಿಕತೆ ಹಾಗೂ ಸಮಾಜಮುಖಿ ದೃಷ್ಟಿಕೋನವನ್ನು ಅಳವಡಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವ ಮೂಲಕ ಸಮಾಜದ ಅಭಿವೃದ್ಧಿಗೆ ಪತ್ರಕರ್ತರು ತಮ್ಮದೇ ಆದ ಕೊಡುಗೆಯನ್ನು ನೀಡಬೇಕೆಂದರು ಸಾನಿಧ್ಯ ವಹಿಸಿ ಮಾತನಾಡಿದ ರುಕ್ಮಾಪುರ, ಸಂಸ್ಥಾನ ಹಿರೇಮಠದ ಪ ಬ್ರ ಗುರು ಶಾಂತಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಪತ್ರಿಕೆಗಳು ಸಮಾಜವನ್ನು ಶುದ್ಧವಾಗಿಡುವುದರ ಜೊತೆಗೆ, ಎಲ್ಲ ವರ್ಗದ ಜನರನ್ನು ಬೆಳಕಿನ ಕಡೆಗೆ ಕರೆದೊಯ್ಯುವ ಮಹತ್ವದ ಕೆಲಸವನ್ನು ಮಾಡುತ್ತವೆ ಎಂದರು.
ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಗೌರವ ಅಧ್ಯಕ್ಷ ದಯಾನಂದ ಎಂ. ಮಾತನಾಡಿ. ಕರ್ನಾಟಕ ಪ್ರೆಸ್ ಕ್ಲಬ್ ಒಂದು ಸಮಾಜಮುಖಿ ಕಾರ್ಯವಾಗಿ ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಈ ಭಾಗದಲ್ಲಿ ಪ್ರಥಮ ಬಾರಿಗೆ ಇಂತಹ ಸಕ್ರಿಯ ಕಾರ್ಯಚಟುವಟಿಕೆಗಳು ನಡೆಯುತ್ತಿರುವುದು ಶ್ಲಾಘನೀಯ
ಪತ್ರಕರ್ತರು ಸಮಾಜದ ನೈತಿಕ ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸತ್ಯ, ನ್ಯಾಯ ಮತ್ತು ಜನಪರ ದೃಷ್ಟಿಕೋನವನ್ನು ಅಳವಡಿಸಿಕೊಂಡು ಸಮಾಜದ ಬೆಳವಣಿಗೆಗೆ ಪತ್ರಿಕೆಗಳು ದಾರಿ ತೋರಿಸುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು. ತಾಲೂಕು ಅಧ್ಯಕ್ಷ ಗಂಗಾಧರ ನಾಯಕ ವಹಿಸಿದ್ದರು. ಮುಖ್ಯ ಅತಿಗಳಾಗಿ ರಾಜ್ಯ ಉಪಾಧ್ಯಕ್ಷ ಹಲಗಿ ಸುರೇಶ.ಉತ್ತರ ಕರ್ನಾಟಕ ವಿಭಾಗದ್ಯಾಕ್ಷ ಮಹೇಶ ಕುಂಬಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಮ ಎಂ ಸೇರಿದಂತೆ ಕರ್ನಾಟಕ ಪ್ರೆಸ್ ಕ್ಲಬ್‌ನ ತಾಲ್ಲೂಕು ಘಟಕದ ಪದಾಧಿಕಾರಿಗಳು, ಸದಸ್ಯರು ಅಧಿಕಾರಿಗಳು, ಗಣ್ಯರು ಇತರರು ಇದ್ದರು. ನಂತರ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ವಾಲ್ಮೀಕಿ ಭವನದಲ್ಲಿ ಇಂದು ಜುಲೈ 29ರಂದು ಗುರು ಪೂರ್ಣಿಮಾ ಹುಣ್ಣಿಮೆಯ ದಿನದಂದು ಸುರಪುರ ಪಟ್ಟಣದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆ ವತಿಯಿಂದ ಪತ್ರಕರ್ತರ ದಿನಾಚರಣೆ ಅಂಗವಾಗಿ ಹಾಗೂ ನೂತನ ತಾಲೂಕು ಕರ್ನಾಟಕ ಪ್ರೆಸ್ ಕ್ಲಬ್ ಪದಗ್ರಹಣ ನೆರವೇರಿಸಲಾಯಿತು ಇದೇ ಸಂದರ್ಭದಲ್ಲಿ ಸಾನಿಧ್ಯ ಉಳಿಸಿಕೊಂಡ ರುಕ್ಕಂಪೂರು ಸಂಸ್ಥಾನ ಹಿರೇಮಠದ ಪ ಬ್ರ ಗುರು ಶಾಂತಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಉದ್ಘಾಟಕರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜಕೀಯ ಮುಖಂಡರು ಹಾಗೂ ತಾಲೂಕು ಅಧಿಕಾರಿಗಳು ಸಾಮಾಜಿಕ ಹೋರಾಟಗಾರರು ಹಿರಿಯ ಪತ್ರಕರ್ತರು ಭಾಗವಹಿಸಿದರು ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಅಧ್ಯಕ್ಷರಾಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿರುವ ಶ್ರೀ ಗಂಗಾಧರ ನಾಯಕ ಕಾರ್ಯಕ್ರಮದ ಉಪನ್ಯಾಸಕರಾದ ಡಾ ನಂದು ಪೂಜಾರಿ ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಪ್ರಶ್ ಕ್ಲಬ್ ಸಂಘಟನೆ ವತಿಯಿಂದ ಕಾರ್ಯಕ್ರಮದಲ್ಲಿ ತಾಲೂಕಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. Chief reporter Gundappa Yadagiri Jilla.






