ಪತ್ರಿಕೋದ್ಯಮ

ಕನಕಗಿರಿಯಲ್ಲಿ ಇಂದಿನಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರ.

ಕನಕಗಿರಿಯಲ್ಲಿ ಇಂದಿನಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರ

ಕನಕಗಿರಿ, ಸೆ.02: ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ (ಕರ್ನಾಟಕ) ಜಿಲ್ಲಾ ಸಂಸ್ಥೆ, ಕೊಪ್ಪಳ ಇವರ ಸಹಯೋಗದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಕನಕಗಿರಿ ಶಾಸಕರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉದ್ಘಾಟಕರಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಜರಂಗಬಲಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ ವಿಶ್ವವಿದ್ಯಾಲಯ ಸೇರಿದಂತೆ ಅದರ ವ್ಯಾಪ್ತಿಗೆ ಒಳಪಡುವ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಈ ಪ್ರೇರಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ (ಕರ್ನಾಟಕ) ರಾಜ್ಯ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್. ಸಿಂಧ್ಯಾ, ಕನಕಗಿರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ತನುಶ್ರೀ ಟಿ.ಜೆ. ರಾಮಚಂದ್ರ, ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳಾದ ಚಂದ್ರಶೇಖರ ಶಂಬಣ್ಣ ಗಾಳಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ರಾಜಶೇಖರ ಭಾಗವಹಿಸಲಿದ್ದಾರೆ.

ಅದೇ ರೀತಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಪ್ಪಳದ ಜಿಲ್ಲಾ ಮುಖ್ಯ ಆಯುಕ್ತರಾದ ಹೆಚ್.ಎಂ. ಸಿದ್ದರಾಮಸ್ವಾಮಿ, ಕಲ್ಯಾಣ ಕರ್ನಾಟಕದ ರೋವರಿಂಗ್ ಮತ್ತು ರೇಂಜರಿಂಗ್ ಉಸ್ತುವಾರಿಗಳಾದ ಮಲ್ಲೇಶ್ವರಿ ಜುಜಾರೆ ಎ.ಎಸ್.ಒ.ಸಿ., ಗೈಡ್ಸ್ ಜಿಲ್ಲಾ ಸಂಸ್ಥೆ ಕೊಪ್ಪಳದ ಆಯುಕ್ತರಾದ ಅರುಣಕುಮಾರಿ ವಸ್ತ್ರದ್, ಸ್ಕೌಟ್ಸ್ ಜಿಲ್ಲಾ ಸಂಸ್ಥೆ ಕೊಪ್ಪಳದ ಆಯುಕ್ತರಾದ ಮಲ್ಲಿಕಾರ್ಜುನ ಚೌಕಿಮಠ, ಜಿಲ್ಲಾ ಕಾರ್ಯದರ್ಶಿಗಳಾದ ಮಾರುತಿ ಅರೆಯರ್ ಹಾಗೂ ಜಿಲ್ಲಾ ಸಂಘಟಕರಾದ ಮಲ್ಲೇಶಪ್ಪ ಕೆ.ಟಿ. ಅವರು ಉಪಸ್ಥಿತರಿರಲಿದ್ದಾರೆ.

ಇನ್ನು ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಕ್ಷಿತ್ ಎ., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸರ್ವಮಂಗಳಮ್ಮ ಟಿ.ಆರ್., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸಂಗಮೇಶ ಹಾಗೂ ತಾಲೂಕು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸೋಮಶೇಖರಪ್ಪ ಕಂಚಿ ಅವರು ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಬಜರಂಗಬಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ಈ ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶ ಹೊಂದಿದ್ದು, ವಿವಿಧ ಕಾಲೇಜುಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಭಾಗವಹಿಸುವಿಕೆಯಿಂದ ಶಿಬಿರ ಯಶಸ್ವಿಯಾಗುವ ನಿರೀಕ್ಷೆಯಿದೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button