ಜನರ ಬಳಿಗೆ ಆಡಳಿತ, ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಚಿಕ್ಕಮಾದಿನಾಳದಲ್ಲಿ ಪ್ರಜಾಸೇವಾ ಆಂದೋಲನ.ಕನಕಗಿರಿ

ಜನರ ಬಳಿಗೆ ಆಡಳಿತ, ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಚಿಕ್ಕಮಾದಿನಾಳದಲ್ಲಿ ಪ್ರಜಾಸೇವಾ ಆಂದೋಲನ
ಕನಕಗಿರಿ: ತಾಲೂಕಿನ ಚಿಕ್ಕಮಾದಿನಾಳ ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಯಿತು.
ಜನರ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಸೇವೆ ಹಾಗೂ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದು, ಸಂಬಂಧಿಸಿದ ಇಲಾಖೆಗಳ ಮೂಲಕ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಚಂದ್ರಶೇಖರ್ ಶಂಬಣ್ಣ ಗಾಳಿ, ತಾಲೂಕ್ ಪಂಚಾಯತ್ (EO) ಕೆ. ರಾಜಶೇಖರ್ ನಾಯಕ್, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ : ಚೇತನ್ ಯಾದವ್ ಕನಕಗಿರಿ..


