ಮೀಟರ್ ರೀಡಿಂಗ್ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5, ರಂದು ಪ್ರತಿಭಟನೆ – ಮಲ್ಲಿಕಾರ್ಜುನ ಬೆಟ್ಟಸ್ವಾಮಿ ಬೆಂಗಳೂರು

ಮೀಟರ್ ರೀಡಿಂಗ್ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5, ರಂದು ಪ್ರತಿಭಟನೆ – ಮಲ್ಲಿಕಾರ್ಜುನ ಬೆಟ್ಟಸ್ವಾಮಿ ಬೆಂಗಳೂರು.ಮೀಟರ್ ರೀಡಿಂಗ್ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5, ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಲೀಲಾ ಸಾಗರ್ ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲ ತಿಳಿಸಿದರು .
ಮೀಟರ್ ರೀಡಿಂಗ್ ನೌಕರರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಸೂಕ್ತ ವೇತನ, ಭದ್ರತೆ ಹಾಗೂ ಇತರ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಟರ್ ರೀಡಿಂಗ್ ಆಧಾರದ ಮೇಲೆ ನೀಡುತ್ತಿರುವ ವೇತನ ಪದ್ಧತಿಯನ್ನು ಬದಲಿಸಿ, ನ್ಯಾಯಯುತ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸೂಕ್ತ ಭದ್ರತೆ ಹಾಗೂ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದರು.
ರಜಾ ದಿನಗಳಲ್ಲಿ ಕೆಲಸ ಮಾಡಿಸಿದರೆ ಎರಡು ಪಟ್ಟು ವೇತನ ನೀಡಬೇಕು ಎಂದು ಕೇಳಿದರು.
ಕೆಲಸಕ್ಕೆ ಸೇರುವಾಗ ಗುತ್ತಿಗೆದಾರರು ಪಡೆದಿರುವ ಮೂಲ ದಾಖಲೆಗಳನ್ನು ನೌಕರರಿಗೆ ವಾಪಸ್ ನೀಡಬೇಕು ಎಂದು ಡಿಮ್ಯಾಂಡ್ ಮಾಡಿದರು.
ನೌಕರರ ಬೇಡಿಕೆಗಳನ್ನು ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಅಕ್ಟೋಬರ್ 5ರಿಂದ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ಸಂಘದ ಅಧ್ಯಕ್ಷರು ಹೆಚ್ಚಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಬೆಟ್ಟಸ್ವಾಮಿಗೌಡ ಹಾಗೂ ರಾಜ್ಯಾಧ್ಯಕ್ಷ ಲೀಲಾ ಸಾಗರ ಎಂ.ಎಸ್. ಸೇರಿದಂತೆ ಮುಂತಾದವರು ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ. ಮಂಜುಳಾ ರೆಡ್ಡಿ.


